1,130 ಅಗ್ನಿಶಾಮಕ ಕಾನ್‌ಸ್ಟೆಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ಪಿಯುಸಿ ಪಾಸಾಗಿದ್ರೆ ಅರ್ಜಿ ಹಾಕಿ... CISF Constable Fireman Recruitment 2024

JOBS
12 September 2024

1,130 ಅಗ್ನಿಶಾಮಕ ಕಾನ್‌ಸ್ಟೆಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ಪಿಯುಸಿ ಪಾಸಾಗಿದ್ರೆ ಅರ್ಜಿ ಹಾಕಿ... CISF Constable Fireman Recruitment 2024
WhatsApp Group Join Now
Telegram Group Join Now

CISF Constable Fireman Recruitment 2024 : ಕೇಂದ್ರ ಸಶಸ್ತ್ರ ಪೊಲೀಸ್ ಪಡೆಯಾದ (Central Armed Police Force) ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯು (Central Industrial Security Force - CISF) ದೇಶಾದ್ಯಂತ ಖಾಲಿ ಇರುವ ಕಾನ್‌ಸ್ಟೆಬಲ್ (Fireman) ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಮುಂದಾಗಿದೆ. ಒಟ್ಟು 1,130 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಕರ್ನಾಟಕದಲ್ಲಿ 33 ಹುದ್ದೆಗಳು ಲಭ್ಯವಿವೆ.


ಪಿಯುಸಿ ಅಥವಾ 12ನೇ ತರಗತಿ ಪೂರ್ಣಗೊಳಿಸಿದ, ಸಂಸ್ಥೆಯ ಅಧಿಸೂಚನೆಯಲ್ಲಿ ಸೂಚಿಸಿರುವ ಎಲ್ಲ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಇದೇ ಸೆಪ್ಟೆಂಬರ್ 30ರೊಳಗೆ ಅನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.


ಇದನ್ನೂ ಓದಿ: ಭರ್ಜರಿ ಬಡ್ಡಿ ನೀಡುವ ಪೋಸ್ಟ್ ಆಫೀಸ್ ಸೇವಿಂಗ್ಸ್ ಸ್ಕೀಮ್ | ಈಗಲೇ ಹೂಡಿಕೆ ಮಾಡಿ... National Savings Certificate - NSC


ಅರ್ಜಿ ಶುಲ್ಕದ ವಿವರ


ಎಸ್ಸಿ/ಎಸ್ಟಿ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಈ ವರ್ಗದ ಅಭ್ಯರ್ಥಿಗಳು ಸಂಪೂರ್ಣ ಉಚಿತವಾಗಿ ಅರ್ಜಿ ಸಲ್ಲಿಸಬಹುದು. ಇತರೆ ಎಲ್ಲ ವರ್ಗದ ಅಭ್ಯರ್ಥಿಗಳು 100 ರೂಪಾಯಿ ಶುಲ್ಕವನ್ನು ಆನ್‌ಲೈನ್ ಅಥವಾ ಚಲನ್ ಮೂಲಕ ಪಾವತಿಸಬೇಕು.


ವಯೋಮಿತಿ ವಿವರ


ಅಭ್ಯರ್ಥಿಯು ಸೆಪ್ಟೆಂಬರ್ 30ಕ್ಕೆ ಅನ್ವಯವಾಗುವಂತೆ ಕನಿಷ್ಠ 18 ವರ್ಷದಿಂದ ಗರಿಷ್ಠ 23 ವರ್ಷದೊಳಗಿರಬೇಕು. ಒಬಿಸಿ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ 3 ವರ್ಷ, ಎಸ್ಸಿ/ಎಸ್ಟಿ ವರ್ಗದ ಅಭ್ಯರ್ಥಿಗಳಿಗೆ 5 ವರ್ಷ ವಯೋ ಸಡಿಲಿಕೆ ಅನ್ವಯವಾಗಲಿದೆ.


ಇದನ್ನೂ ಓದಿ: ಸ್ವಂತ ಮನೆ ಕಟ್ಟಿಕೊಳ್ಳಲು ಕೇಂದ್ರ ಸರಕಾರದಿಂದ ಆರ್ಥಿಕ ನೆರವು | ಅರ್ಜಿ ಸಲ್ಲಿಸುವ ಮಾಹಿತಿ ತಿಳಿಯಿರಿ Pradhanmantri Aawas Yojana Home


ಮಾಸಿಕ ವೇತನ ವಿವರ


ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ ಕಾನ್‌ಸ್ಟೆಬಲ್/ ಫೈರ್‌ಮನ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 21,700 ರಿಂದ 69,100 ರೂಪಾಯಿ ವರೆಗಿನ ವೇತನ ಶ್ರೇಣಿ ನಿಗದಿಪಡಿಸಲಾಗಿದೆ.


ಶೈಕ್ಷಣಿಕ ಅರ್ಹತೆ ಏನಿರಬೇಕು?


ಮೊದಲೇ ಹೇಳಿದಂತೆ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ ಕಾನ್‌ಸ್ಟೆಬಲ್/ ಫೈರ್‌ಮನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಯು ಪಿಯುಸಿ ಅಥವಾ 12ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.


ಇದನ್ನೂ ಓದಿ: ಕಮ್ಮಿ ಬಡ್ಡಿಯಲ್ಲಿ ಗೃಹ ಸಾಲ ನೀಡುವ ಬಾಂಕುಗಳ ಪಟ್ಟಿ | ಗೃಹ ಸಾಲದ ಸಂಪೂರ್ಣ ಮಾಹಿತಿ ಇಲ್ಲಿದೆ... How to get home loan at low interest?


ಆಯ್ಕೆ ಪ್ರಕ್ರಿಯೆ ಹೇಗೆ?


ದೈಹಿಕ ದಕ್ಷತೆ ಪರೀಕ್ಷೆ (PET), ದೈಹಿಕ ಗುಣಮಟ್ಟದ ಪರೀಕ್ಷೆ (PST) ದಾಖಲೆ ಪರಿಶೀಲನೆ, ಲಿಖಿತ ಪರೀಕ್ಷೆ ಮೂಲಕ ನೇಮಕ ಮಾಡಿಕೊಳ್ಳಲಾಗುತ್ತದೆ. ವೈದ್ಯಕೀಯ ಪರೀಕ್ಷೆ ಲಿಖಿತ ಪರೀಕ್ಷೆಯನ್ನು ಕಂಪ್ಯೂಟರ್ ಅಥವಾ ಒಎಂಆರ್ ಮಾದರಿಯಲ್ಲಿ ನಡೆಸಲಾಗುತ್ತದೆ. ಆಬ್ಜೆಕ್ಟೀವ್ ಮಾದರಿಯ 100 ಅಂಕದ ಪ್ರಶ್ನೆಗಳಿರುತ್ತವೆ. ಈ ಪರೀಕ್ಷೆಯನ್ನು ಇಂಗ್ಲೀಷ್ ಅಥವಾ ಹಿಂದಿಯಲ್ಲಿ ನಡೆಸಲಾಗುತ್ತದೆ. ತಪ್ಪು ಉತ್ತರಗಳಿಗೆ ಯಾವುದೇ ಋಣಾತ್ಮಕ ಅಂಕಗಳಿರುವುದಿಲ್ಲ.


ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು


ಅರ್ಜಿ ಸಲ್ಲಿಕೆ ಮತ್ತು ಶುಲ್ಕ ಪಾವತಿಸಲು ಕೊನೆಯ ದಿನ :

30-09-2024


ಚಲನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ :

02-10-2024


ಅರ್ಜಿ ನಮೂನೆ ತಿದ್ದುಪಡಿಗೆ ಅವಕಾಶ :

2024ರ ಅಕ್ಟೋಬರ್ 10ರಿಂದ 12ರ ವರೆಗೆ


ಅರ್ಜಿ ಸಲ್ಲಿಕೆ ಹೇಗೆ?


ಆಸಕ್ತ, ಅರ್ಹ ಅಭ್ಯರ್ಥಿಗಳು ಇಮೇಲ್ ಐಡಿ, ಮೊಬೈಲ್ ಸಂಖ್ಯೆ, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಇತ್ತೀಚಿನ ಭಾವಚಿತ್ರಗಳ ಸಮೇತ cisf.gov.inಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.


ಅಧಿಸೂಚನೆ : Download


ಇದನ್ನೂ ಓದಿ: ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆಯಲು ನಿಮ್ಮ ಮೊಬೈಲ್‌ನಲ್ಲಿಯೇ ಅರ್ಜಿ ಸಲ್ಲಿಸಿ... Caste and Income Certificate Apply Online

Most Popular

Related Posts