2024ರ ಮುಂಗಾರು ಬೆಳೆ ಸಮೀಕ್ಷೆ ಹೀಗೆ ಮಾಡಿ... Crop Survey for Monsoon 2024

AGRICULTURE
01 August 2024

2024ರ ಮುಂಗಾರು ಬೆಳೆ ಸಮೀಕ್ಷೆ ಹೀಗೆ ಮಾಡಿ... Crop Survey for Monsoon 2024
WhatsApp Group Join Now
Telegram Group Join Now

Crop Survey for Monsoon 2024 : 2024-25ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಇದಕ್ಕಾಗಿ ಸ್ವತಃ ರೈತರೇ ಬೆಳೆ ಸಮೀಕ್ಷೆ ಮಾಡಲು ಅನುಕೂಲವಾಗುವಂತೆ ಮೊಬೈಲ್ ಆ್ಯಪ್ ಅಭಿವೃದ್ದಿಪಡಿಸಲಾಗಿದೆ. ರೈತರು ತಮ್ಮ ಜಮೀನಿನ ಬೆಳೆ ವಿವರವನ್ನು ಯಾವುದೇ ಲೋಪದೋಷಗಳು ಇಲ್ಲದಂತೆ ತಾವೇ ದಾಖಲಿಸಲು ಸರ್ಕಾರದಿಂದ ಸುವರ್ಣಾವಕಾಶ ಕಲ್ಪಿಸಲಾಗಿದೆ.


ರೈತರು ಗೂಗಲ್ ಪ್ಲೇ ಸ್ಟೋರ್‌ನಿಂದ ‘ಮುಂಗಾರು ರೈತರ ಬೆಳೆ ಸಮೀಕ್ಷೆ 2024’ ಆ್ಯಪ್ ಅನ್ನು ಡೌನ್‌ಲೋಡ್ ಮಾಡಿಕೊಂಡು ಖುದ್ದು ತಾವೇ ಬೇಳೆ ಸಮೀಕ್ಷೆ ಮಾಡಬಹುದಾಗಿದೆ. ನಿಗದಿತ ಅವಧಿಯೊಳಗೆ ಮೊಬೈಲ್ ಆ್ಯಪ್’ನಲ್ಲಿ ತಮ್ಮ ಜಮೀನಿನ ಸರ್ವೆ ನಂಬರ್‌ವಾರು ಬೆಳೆ ವಿವರವನ್ನು ನಿಖರವಾಗಿ ದಾಖಲಿಸಿ ಮುಂಗಾರು-2024ರ ಬೆಳೆ ಸಮೀಕ್ಷೆ ಕಾರ್ಯವನ್ನು ಸಂಪೂರ್ಣವಾಗಿ ಯಶಸ್ವಿಗೊಳಿಸಬೇಕೆಂದು ರಾಜ್ಯದ ವಿವಿಧ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ಕೃಷಿ ಇಲಾಖೆಯ ಎಫ್.ಐ.ಡಿ ಸಂಖ್ಯೆ ಇರುವ ರೈತರು ಮುಂಗಾರು-2024ರ ಬೆಳೆ ಸಮೀಕ್ಷೆಯನ್ನು ಸರಳವಾಗಿ ಮಾಡಬಹುದು. ರೈತರು ಆಕಸ್ಮಾತ್ ಎಫ್.ಐ.ಡಿ ಸಂಖ್ಯೆಯನ್ನು ಇನ್ನೂ ಪಡೆದಿಲ್ಲದಿದ್ದರೆ ಹತ್ತಿರದ ಕೃಷಿ ಸಂಪರ್ಕ ಕೇಂದ್ರ ಅಥವಾ ಗ್ರಾಮ ಪಂಚಾಯತಿ ಕಾರ್ಯದರ್ಶಿಗಳನ್ನು ಭೇಟಿಯಾಗಿ ಎಫ್.ಐ.ಡಿ ಸಂಖ್ಯೆಯನ್ನು ಮಾಡಿಸಿಕೊಳ್ಳಬಹುದು.


ಗೂಗಲ್ ಪ್ಲೇ ಸ್ಟೋರ್‌ನಿಂದ ಆ್ಯಪ್ ಡೌನ್‌ಲೋಡ್ ಮಾಡಿಕೊಂಡ ಬಳಿಕ ಇ-ಕೆವೈಸಿ ಮೂಲಕ ಆಧಾರ್ ದೃಢೀಕರಿಸಿ ಆಯ್ಕೆಯನ್ನು ಮಾಡಿ ಆಧಾರ್ ಸಂಖ್ಯೆಯನ್ನು ದಾಖಲಿಸಿ ಜನರೇಟ್ ಒ.ಟಿ.ಪಿ ಆಯ್ಕೆಯನ್ನು ಮಾಡಬೇಕು. ನಂತರ ಆಧಾರ್ ಸಂಖ್ಯೆಗೆ ಜೋಡಣೆಯಾಗಿರುವ ಮೊಬೈಲ್ ಸಂಖ್ಯೆಗೆ ಬರುವ ಒ.ಟಿ.ಪಿಯನ್ನು ದಾಖಲಿಸಬೇಕು. ರೈತರ ಎಫ್.ಐ.ಡಿ ಸಂಖ್ಯೆಗೆ ಜೋಡಣೆಯಾಗಿರುವ ಎಲ್ಲಾ ಜಮೀನುಗಳ ಮಾಹಿತಿ ಇದರಲ್ಲಿ ಡೌನ್‌ಲೋಡ್ ಆಗುತ್ತದೆ.


ಮುಂದಿನ ಹಂತದಲ್ಲಿ ಸರ್ವೆ ನಂಬರ್, ಹಿಸ್ಸಾ, ಮಾಲೀಕನ ಹೆಸರು ಆಯ್ಕೆ ಮಾಡಿ ಕ್ಷೇತ್ರವನ್ನು ನಮೂದಿಸಬೇಕು. ಜಮೀನು ಸರ್ವೆ ನಂಬರ್‌ಗಳ ಗಡಿ ರೇಖೆಯೊಳಗೆ ನಿಂತು ಬೆಳೆ ವಿವರವನ್ನು ದಾಖಲಿಸಿ ಫೋಟೋ ತೆಗೆದು ಮಾಹಿತಿಯನ್ನು ಅಪ್‌ಲೋಡ್ ಮಾಡಬೇಕು.


ಬೆಳೆ ಸಮೀಕ್ಷೆ ಮಾಡುವುದರಿಂದ ರೈತರಿಗೆ ಹಲವು ಪ್ರಯೋಜನಗಳಾಗಲಿವೆ. ಬರ-ನೆರೆ ಪರಿಹಾರ, ಬೆಂಬಲ ಬೆಲೆ, ಬೆಳೆ ವಿಮೆ, ಬೆಳೆ ಕಟಾವು ಪ್ರಯೋಗ ಅನುಷ್ಠಾನ, ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆಗಳ ಫಲಾನುಭವಿ ಆಧಾರಿತ ಯೋಜನೆಗಳ ಅನುಷ್ಠಾನ ಹಾಗೂ ಪಹಣಿಯಲ್ಲಿ ಬೆಳೆ ವಿವರ ದಾಖಲಿಸಲು ಬಳಸಬಹುದು.

Most Popular

Related Posts