ಪಿಯುಸಿ ಪಾಸಾದವರಿಗೆ ಗ್ರಾಮ ಪಂಚಾಯಿತಿ ಹುದ್ದೆಗಳಿಗೆ ಅರ್ಜಿ ಆಹ್ವಾನ Gram Panchayat Library Supervisor Recruitment 2024

JOBS
30 June 2024

ಪಿಯುಸಿ ಪಾಸಾದವರಿಗೆ ಗ್ರಾಮ ಪಂಚಾಯಿತಿ ಹುದ್ದೆಗಳಿಗೆ ಅರ್ಜಿ ಆಹ್ವಾನ Gram Panchayat Library Supervisor Recruitment 2024
WhatsApp Group Join Now
Telegram Group Join Now

Gram Panchayat Library Supervisor Recruitment 2024 : ಪಿಯುಸಿ ಪಾಸಾದ ಅಭ್ಯರ್ಥಿಗಳಿಗೆ ವಿವಿಧ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಬೇಕಾಗಿರುವ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿದೆ...


ದಾವಣಗೆರೆ ಜಿಲ್ಲೆಯ ಬೇರೆ ಬೇರೆ ತಾಲ್ಲೂಕುಗಳ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಕೃತ ಅಧಿಸೂಚನೆ ಹೊರಡಿಸಿದೆ. ದಾವಣಗೆರೆ ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಮೇಲ್ವಿಚಾರಕರು ಹುದ್ದೆಗಳಿಗೆ (Library Supervisor jobs) ನೇಮಕ ನಡೆಯಲಿದ್ದು; ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: 17,727 ಕೇಂದ್ರ ಸರ್ಕಾರಿ ಹುದ್ದೆಗಳ ಬೃಹತ್ ನೇಮಕಾತಿಗೆ ಅರ್ಜಿ ಆಹ್ವಾನ | ಪದವೀಧರರಿಗೆ ಭರ್ಜರಿ ಅವಕಾಶ 


ಶೈಕ್ಷಣಿಕ ವಿದ್ಯಾರ್ಹತೆ ಏನು?

ದಾವಣಗೆರೆ ಜಿಲ್ಲೆಯಲ್ಲಿ ವಿವಿಧ ಗ್ರಾಮ ಪಂಚಾಯಿತಿಗಳ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳಲ್ಲಿ ಖಾಲಿ ಇರುವ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿAದ ಪಿಯುಸಿ ಪಾಸಾಗಿರಬೇಕು. ಸರ್ಟಿಫಿಕೇಶನ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಮುಗಿಸಿ, ಮಾನ್ಯವಾದ ಪ್ರಮಾಣ ಪತ್ರ ಹೊಂದಿರಬೇಕು. 


ಕನಿಷ್ಠ ಮೂರು ತಿಂಗಳ ಕಂಪ್ಯೂಟರ್ ಕೋರ್ಸ್ ಪಡೆದು ಉತ್ತೀರ್ಣರಾಗಿರಬೇಕು. ಬಹುಮುಖ್ಯವಾಗಿ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸಂಬAಧಪಟ್ಟ ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ನಿವಾಸಿಯಾಗಿರಬೇಕು.


ಇದನ್ನೂ ಓದಿ: ಕೃಷಿ ಇಲಾಖೆಯಲ್ಲಿ 600ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ | ಯಾವೆಲ್ಲ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ? 


ವಯೋಮಿತಿ ವಿವರ

ಅಭ್ಯರ್ಥಿಗಳ ವಯಸ್ಸು ನಿಗದಿತ ದಿನಾಂಕಕ್ಕೆ ಕನಿಷ್ಠ 18 ವರ್ಷ ನಿಗದಿಪಡಿಸಲಾಗಿದೆ. ಗರಿಷ್ಠ ವಯೋಮಿತಿಯನ್ನು ವರ್ಗಗಳಿಗೆ ಅನುಸಾರವಾಗಿ ಸಾಮಾನ್ಯದ ಅಭ್ಯರ್ಥಿಗಳಿಗೆ 35 ವರ್ಷ, 2ಎ, 2ಬಿ, 3ಎ, 3ಬಿ ವರ್ಗದ ಅಭ್ಯರ್ಥಿಗಳಿಗೆ 38 ವರ್ಷ ಹಾಗೂ ಪ. ಜಾತಿ, ಪ. ಪಂಗಡ, ಪ್ರವರ್ಗ 1 ವರ್ಗದ ಅಭ್ಯರ್ಥಿಗಳಿಗೆ 40 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.


ಮಾಸಿಕ ಸಂಬಳ ಎಷ್ಟಿರುತ್ತದೆ?

ಗ್ರಂಥಾಲಯ ಮೇಲ್ವಿಚಾರಕರಾಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ  15,196 ರೂಪಾಯಿ ಜೊತೆಗೆ ತುಟ್ಟಿ ಭತ್ಯೆಯನ್ನು ನೀಡಲಾಗುವುದು.


ಆಯ್ಕೆ ಮಾಡಿಕೊಳ್ಳುವ ವಿಧಾನ

ಹುದ್ದೆಗಳಿಗೆ ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಮೆರಿಟ್ ಲಿಸ್ಟ್’ನಲ್ಲಿ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಲಾಗುವುದು. ನಂತರ ದಾಖಲೆಗಳ ಪರಿಶೀಲನೆ ಮತ್ತು ಸಂದರ್ಶನದ ಮುಖಾಂತರ ಅಭ್ಯರ್ಥಿಗಳನ್ನು ಅಂತಿಮವಾಗಿ ಆಯ್ಕೆ ಮಾಡಿಕೊಳ್ಳಲಾಗುವುದು.


ಇದನ್ನೂ ಓದಿ: ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ ಪಡೆಯುವುದು ಹೇಗೆ? ಬಾಂಕುಗಳ ಪಟ್ಟಿ ಸಹಿತ ಸಂಪೂರ್ಣ ಮಾಹಿತಿ ಇಲ್ಲಿದೆ... 


ಅರ್ಜಿ ಸಲ್ಲಿಸುವ ವಿಧಾನ ಹೇಗೆ? 

Gram Panchayat Recruitment 2024 ಮೇಲ್ವಿಚಾರಕರ ಹುದ್ದೆಗಳಿಗೆ ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸುವಾಗ ಈ ಕೆಳಗಿನ ದಾಖಲೆಗಳನ್ನು ಸಲ್ಲಿಸುವುದು ಅವಶ್ಯಕ.

  • * ಪಿಯುಸಿ ಅಂಕ ಪಟ್ಟಿ
  • * ಲೈಬ್ರರಿ ಸೈನ್ಸ್’ನಲ್ಲಿ ಉತ್ತೀರ್ಣರಾದ ಅಂಕಪಟ್ಟಿ
  • * ತಹಶೀಲ್ದಾರರಿಂದ ಪಡೆದ ವಾಸಸ್ಥಳ ಪ್ರಮಾಣ ಪತ್ರ 
  • * 10ನೇ ತರಗತಿ ಅಂಕಪಟ್ಟಿ 


ಅರ್ಜಿ ಶುಲ್ಕವೆಷ್ಟು?

ಗ್ರಾಮ ಪಂಚಾಯತಿ ಮ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ವಿವಿಧ ವರ್ಗಗಳಿಗೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಸಾಮಾನ್ಯ ವರ್ಗದವರಿಗೆ 500 ರೂಪಾಯಿ ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ 300 ರೂಪಾಯಿ, ಪ. ಜಾತಿ, ಪ. ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಅಭ್ಯರ್ಥಿಗಳಿಗೆ 200 ರೂಪಾಯಿ ಹಾಗೂ ಎಲ್ಲಾ ವಿಧದ ವಿಕಲಚೇತನ / ಅಂಗವಿಕಲ ಅಭ್ಯರ್ಥಿಗಳಿಗೆ 100 ರೂಪಾಯಿ ಅರ್ಜಿ ಶುಲ್ಕ ಪಾವತಿಸಬೇಕು. 


ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : 27-06-2024

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 27-07-2024


ಅಧಿಸೂಚನೆ  (Download)

ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್  (Apply Now)


ಇದನ್ನೂ ಓದಿ: ರೈತರು ಸರಕಾರದ ವಿವಿಧ ಯೋಜನೆಗಳ ಪ್ರಯೋಜನ ಪಡೆಯಲು ಎಫ್‌ಐಡಿ ನೋಂದಣಿ ಕಡ್ಡಾಯ... 

Most Popular

Related Posts