ಪಿಯುಸಿ ಪಾಸಾಗಿದ್ರೆ ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಹಾಕಿ... Gram Panchayat Library Supervisor Recruitment 2024 Dharwad

JOBS
10 November 2024

ಪಿಯುಸಿ ಪಾಸಾಗಿದ್ರೆ ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಹಾಕಿ...  Gram Panchayat Library Supervisor Recruitment 2024 Dharwad
WhatsApp Group Join Now
Telegram Group Join Now

ರಾಜ್ಯದ ವಿವಿಧ ಜಿಲ್ಲಾ ಪಂಚಾಯತಿ ವತಿಯಿಂದ ಆಯಾ ಜಿಲ್ಲೆಗಳ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕರು (Gram Panchayat Library Supervisor) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗುತ್ತಿದೆ. ಈಗಾಗಲೇ ಹಲವು ಜಿಲ್ಲೆಗಳಲ್ಲಿ ನೇಮಕಾತಿ ಪ್ರಕ್ರಿಯೆ ಮುಕ್ತಾಯವಾಗಿದ್ದು; ಇದೀಗ ಧಾರವಾಡ ಜಿಲ್ಲೆಯ (Dharwad District) ವಿವಿಧ ಗ್ರಾಮ ಪಂಚಾಯತಿ ಗ್ರಂಥಾಲಯ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ.


ಧಾರವಾಡ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಮೇಲ್ವಿಚಾರಕರ ಹುದ್ದೆಗಳ ನೇಮಕಾತಿಗೆ (Dharwad Gram Panchayat Recruitment 2024) ಸಂಬ೦ಧಿಸಿದ೦ತೆ ಧಾರವಾಡ ಜಿಲ್ಲಾ ಪಂಚಾಯತ್ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ವಿದ್ಯಾರ್ಹತೆ, ಸಂಬಳ, ವಯೋಮಿತಿ ಹಾಗೂ ಅರ್ಜಿ ಸಲ್ಲಿಕೆ ವಿವರವನ್ನು ಇಲ್ಲಿ ನೀಡಲಾಗಿದೆ...


Gram Panchayat Recruitment 2024 ನೇಮಕಾತಿ ಸಂಕ್ಷಿಪ್ತ ವಿವರ


  1. ಹುದ್ದೆಯ ಹೆಸರು : ಗ್ರಾ.ಪಂ ಗ್ರಂಥಾಲಯ ಮೇಲ್ವಿಚಾರಕರು
  2. ಅರ್ಜಿ ಸಲ್ಲಿಕೆ : ಆನ್‌ಲೈನ್ ಮುಖಾಂತರ
  3. ಒಟ್ಟು ಹುದ್ದೆಗಳು : 32 ಹುದ್ದೆಗಳು
  4. ಉದ್ಯೋಗ ಸ್ಥಳ : ಧಾರವಾಡ ಜಿಲ್ಲೆ


ಇದನ್ನೂ ಓದಿ: ಹೊಸ ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ಆಹ್ವಾನ New Ration Card Application for E shram Registered Workers


ಶೈಕ್ಷಣಿಕ ವಿದ್ಯಾರ್ಹತೆ ಏನು?


ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಮೇಲ್ವಿಚಾರಕರು ಹುದ್ದೆಗೆ ಅರ್ಜಿ ಸಲ್ಲಿಸುವವರು ದ್ವಿತೀಯ ಪಿಯುಸಿ ಪಾಸಾಗಿರಬೇಕು. ಸರ್ಟಿಫಿಕೇಶನ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪ್ರಮಾಣ ಪತ್ರ ಹೊಂದಿರಬೇಕು. ಜೊತೆಗೆ ಕನಿಷ್ಠ ಮೂರು ತಿಂಗಳ ಕಂಪ್ಯೂಟರ್ ಕೋರ್ಸ್ ಪಡೆದು ಉತ್ತೀರ್ಣರಾಗಿರಬೇಕು.


ವಯೋಮಿತಿ ಅರ್ಹತೆ ಏನು?


ಈ ಹುದ್ದೆಗಳಿಗೆ ಕನಿಷ್ಠ ವಯೋಮಿತಿಯನ್ನು 18 ವರ್ಷಕ್ಕೆ ನಿಗದಿಪಡಿಸಲಾಗಿದ್ದು; ಗರಿಷ್ಠ ವಯೋಮಿತಿಯನ್ನು ವರ್ಗಗಳ ಅನುಸಾರ ಸಾಮಾನ್ಯ ವರ್ಗದವರಿಗೆ 35 ವರ್ಷ, 2ಎ, 2ಬಿ, 3ಎ,3ಬಿ ವರ್ಗದವರಿಗೆ 38 ವರ್ಷ ಹಾಗೂ ಪ. ಜಾತಿ, ಪ. ಪಂಗಡ, ಪ್ರವರ್ಗ 1 ವರ್ಗದವರಿಗೆ 40 ವರ್ಷವಾಗಿರಬೇಕು.


ಇದನ್ನೂ ಓದಿ: ಪಿಎಂ ವಿದ್ಯಾಲಕ್ಷ್ಮೀ ಯೋಜನೆ : ಯಾವುದೇ ಶೂರಿಟಿ, ಗ್ಯಾರಂಟಿ ಇಲ್ಲದೇ ಸಿಗುತ್ತೆ 10 ಲಕ್ಷ ರೂಪಾಯಿ ವರೆಗೂ ಶಿಕ್ಷಣ ಸಾಲ PM Vidyalakshmi Scheme 2024


ಮಾಸಿಕ ವೇತನವೆಷ್ಟು?


ಗ್ರಂಥಾಲಯ ಮೇಲ್ವಿಚಾರಕರಾಗಿ ಅಂತಿಮ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 16,382.52 ರೂಪಾಯಿ ಸಂಬಳ ನಿಗದಿಪಡಿಸಲಾಗಿದೆ. ಜೊತೆಗೆ ಇತರ ಸರಕಾರಿ ಸವಲತ್ತುಗಳು ಅನ್ವಯವಾಗುತ್ತವೆ.


ನೇಮಕಾತಿಯ ಪ್ರಮುಖ ದಿನಾಂಕಗಳು


  1. ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 05-11-2024
  2. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 04-12-2024


ಅಧಿಸೂಚನೆ : Download

ಅರ್ಜಿ ಸಲ್ಲಿಸುವ ಲಿಂಕ್ : Apply ಮಾಡಿ


ಇದನ್ನೂ ಓದಿ: ಇನ್ಮುಂದೆ ಇಂಟರ್‌ನೆಟ್ ಇಲ್ಲದೇ ಮೊಬೈಲ್‌ನಲ್ಲೇ ನೋಡಿ ನಿಮ್ಮಷ್ಟದ ಟಿವಿ ಚಾನೆಲ್ D2M Technology Prasar Bharati experiment

Most Popular

Related Posts