ಸರ್ಕಾರಿ ಕೋಟಾ ಬಿ.ಇಡಿ ಕೋರ್ಸ್ ವ್ಯಾಸಂಗಕ್ಕೆ ಅರ್ಜಿ ಆಹ್ವಾನ Karnataka B.Ed Course Online Application

EDUCATION
18 October 2024

ಸರ್ಕಾರಿ ಕೋಟಾ ಬಿ.ಇಡಿ ಕೋರ್ಸ್ ವ್ಯಾಸಂಗಕ್ಕೆ ಅರ್ಜಿ ಆಹ್ವಾನ Karnataka B.Ed Course Online Application
WhatsApp Group Join Now
Telegram Group Join Now

ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು (Karnataka School Education Department) 2024-25ನೇ ಸಾಲಿನ ಎರಡು ವರ್ಷದ ಬಿ.ಇಡಿ ಕೋರ್ಸಿನ (B.Ed Course) ವ್ಯಾಸಂಗಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.


ರಾಜ್ಯದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಬಿ.ಇಡಿ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾ (Government Quota) ಸೀಟುಗಳ ದಾಖಲಾತಿಗಾಗಿ ಆನ್‌ಲೈನ್ ಮೂಲಕ ನವೆಂಬರ್ 14ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.


ಅರ್ಜಿಗಳನ್ನು https://schooleducation.karnataka.gov.in ವೆಬ್‌ಸೈಟ್ ಅಧಿಸೂಚನೆಯಲ್ಲಿ ಪ್ರಕಟಿಸಲಾದ ದಾಖಲಾತಿ ವೇಳಾಪಟ್ಟಿ, ಅರ್ಹತೆ, ಮೀಸಲಾತಿ, ಶುಲ್ಕ ಸೇರಿ ಎಲ್ಲ ವಿವರ ಮತ್ತು ಜಿಲ್ಲಾವಾರು ಬಿ.ಇಡಿ ಶಿಕ್ಷಣ ಸಂಸ್ಥೆಗಳ ಪಟ್ಟಿಯನ್ನು ನೀಡಲಾಗಿದೆ.


ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣ ಓದಿ ಅರ್ಥೈಸಿಕೊಂಡು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಶಿಕ್ಷಣ ಇಲಾಖೆಯ ಕೇಂದ್ರೀಕೃತ ದಾಖಲಾತಿ ಘಟಕದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.


ಅಧಿಸೂಚನೆ : Download

ಅರ್ಜಿ ಲಿಂಕ್ : Apply Now

Most Popular

Related Posts