ಕೃಷಿ ಇಲಾಖೆಯಲ್ಲಿ 600ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ | ಯಾವೆಲ್ಲ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ? Karnataka Agri Department Recruitment 2024

JOBS
25 June 2024

ಕೃಷಿ ಇಲಾಖೆಯಲ್ಲಿ 600ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ | ಯಾವೆಲ್ಲ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ? Karnataka Agri Department Recruitment 2024
WhatsApp Group Join Now
Telegram Group Join Now

Karnataka Agri Department Recruitment 2024  : ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು ಕರ್ನಾಟಕ ಕೃಷಿ ಇಲಾಖೆಯಲ್ಲಿ ಖಾಲಿ ಇರುವ 600ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಮಂಜೂರಾತಿ ನೀಡಿರುವುದಾಗಿ ಮಾಹಿತಿ ನೀಡಿದ್ದು; ನೇಮಕಾತಿಯ ಕುರಿತು ಸಂಪೂರ್ಣ ವಿವರ ಇಲ್ಲಿದೆ...


ಕರ್ನಾಟಕ ರಾಜ್ಯ ಕೃಷಿ ಇಲಾಖೆಯಲ್ಲಿ (KSDA - Karnataka State Department Of Agriculture) ವಿವಿಧ ಹಂತದಲ್ಲಿ ನೂರಾರು ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳ ಭರ್ತಿಗೆ ವರ್ಷಗಳಿಂದ ಆಗ್ರಹಗಳು ಕೇಳಿ ಬರುತ್ತಿವೆ. ಇತ್ತೀಚೆಗೆ ಕೃಷಿ ಇಲಾಖೆಯು ಖಾಲಿ ಇರುವ ಟೈಪಿಸ್ಟ್, ಪ್ರಥಮ ದರ್ಜೆ ಸಹಾಯಕರು ಹಾಗೂ ದ್ವಿತೀಯ ದರ್ಜೆ ಸಹಾಯಕರು ಹುದ್ದೆಗಳ ಭರ್ತಿಗಾಗಿ ಕೆಪಿಎಸ್‌ಸಿಗೆ ಪ್ರಸ್ತಾವನೆ ಸಲ್ಲಿಸಿದೆ.


ಕಳೆದ ಮೇ ತಿಂಗಳಲ್ಲಿ ಕೃಷಿ ಇಲಾಖೆಯು ಹೈದರಾಬಾದ್ ಕರ್ನಾಟಕ ವೃಂದ ಹಾಗೂ ಉಳಿಕೆ ಮೂಲ ವೃಂದಗಳಲ್ಲಿ ಖಾಲಿ ಇರುವ ಟೈಪಿಸ್ಟ್, ಎಸ್‌ಡಿಎ, ಎಫ್‌ಡಿಎ ಹುದ್ದೆಗಳ ನೇರ ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿಕೊಡಬೇಕೆಂದು ಕೆಪಿಎಸ್‌ಸಿಗೆ ಪ್ರಸ್ತಾವನೆ ಸಲ್ಲಿಸಿದೆ. ಇವುಗಳಲ್ಲಿ ಹುದ್ದೆಗಳಿಗೆ  ನೇಮಕಾತಿ ನಡೆಯಲಿದೆ ಎಂಬುವುದನ್ನು ಅಧಿಸೂಚನೆ ಪ್ರಕಟಗೊಂಡ ಬಳಿಕ ತಿಳಿಯಲಿದೆ. 


600 ಹುದ್ದೆಗಳ ನೇಮಕಾತಿ 

ರಾಜ್ಯ ಕೃಷಿ ಇಲಾಖೆಯಲ್ಲಿ ಶೇ.57ರಷ್ಟು ಹುದ್ದೆಗಳು ಖಾಲಿ ಇದ್ದು; ಸದ್ಯಕ್ಕೆ 57 ಹುದ್ದೆಗಳನ್ನು ಭರ್ತಿ ಮಾಡಿಕೊಂಡು ಮುಂದಿನ ಹಂತಗಳಲ್ಲಿ ಉಳಿದ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳುವುದಾಗಿ ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು ಹೇಳಿದ್ದಾರೆ. ರಾಜ್ಯದ ರೈತರಿಗೆ ಎಲ್ಲ ಯೋಜನೆಗಳು ಸರಿಯಾದ ಸಮಯಕ್ಕೆ ಸಮರ್ಪಕವಾಗಿ ದೊರೆಯಲು ಕೃಷಿ ಇಲಾಖೆಯ ಅಧಿಕಾರಿಗಳ ಕಾರ್ಯ ಮಹತ್ವದ್ದಾಗಿದೆ. 


ಕೃಷಿ ಇಲಾಖೆಯಲ್ಲಿನ ಕೃಷಿ ಅಧಿಕಾರಿ (Agricultural Officer) ಹಾಗೂ ಸಹಾಯಕ ಕೃಷಿ ಅಧಿಕಾರಿಗಳ (Assistant Agricultural Officer) ನೇಮಕಾತಿಯಿಂದ ರೈತರಿಗೆ ಹೆಚ್ಚಿನ ಮಟ್ಟದಲ್ಲಿ ಅನುಕೂಲವಾಗುತ್ತದೆ. ಆದ್ದರಿಂದ ಸದ್ಯಕ್ಕೆ 600 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಮಂಜೂರಾತಿಯನ್ನು ನೀಡಿ ಮುಂದಿನ ಹಂತದ ಪ್ರಕ್ರಿಯೆಗಳಿಗಾಗಿ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಕಳಿಸಲಾಗಿದೆ ಎಂದು ಕೃಷಿ ಸಚಿವರು ಮಾಹಿತಿ ನೀಡಿದ್ದಾರೆ.


ಕೃಷಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ

ಅಗ್ರಿಕಲ್ಚರಲ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೃಷಿಯಲ್ಲಿ ಪದವಿ ಅಥವಾ ಕೃಷಿ ಇಂಜಿನಿಯರಿAಗ್’ನಲ್ಲಿ ಬಿ.ಟೆಕ್ ಮುಗಿಸಿರುವವರು ಅರ್ಹತೆ ಹೊಂದಿರುತ್ತಾರೆ. ಇದರಲ್ಲಿ ಶೇ. 85ರಷ್ಟು ಹುದ್ದೆಗಳನ್ನು B.Sc agriculture ಮುಗಿಸಿದವರಿಗೆ ಹಾಗೂ ಶೇ.15ರಷ್ಟು ಹುದ್ದೆಗಳನ್ನು B.Tech in Agri Engineering ಮುಗಿಸಿದವರಿಗೆ ಮೀಸಲಿಡಲಾಗಿದೆ.


ಕೃಷಿ ಅಧಿಕಾರಿಯಾಗಿ ನೇಮಕವಾಗುವ ಅಭ್ಯರ್ಥಿಗಳಿಗೆ ಸಿಗುವ ಸಂಬಳ 

ಕರ್ನಾಟಕ ರಾಜ್ಯದ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಕೃಷಿ ಅಧಿಕಾರಿ ಹುದ್ದೆಗಳಿಗೆ ನೇಮಕವಾಗುವ ಅಭ್ಯರ್ಥಿಗಳಿಗೆ ಮಾಸಿಕ ರೂ. 40,900 ರಿಂದ ರೂ.78,200 ವರೆಗೆ ವೇತನ ಇರುತ್ತದೆ. ಜತೆಗೆ ಸರಕಾರದ ಎಲ್ಲ ರೀತಿಯ ಸವಲತ್ತುಗಳು ಅನ್ವಯವಾಗುತ್ತವೆ.


ಆಯ್ಕೆ ಪ್ರಕ್ರಿಯ ಹೇಗೆ?

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲು ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಯನ್ನು ನಡೆಸಿ ನಂತರದ ಹಂತದಲ್ಲಿ ದಾಖಲಾತಿ ಪರಿಶೀಲನೆ ಮುಖಾಂತರ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.


ಈ ನೇಮಕಾತಿಯು ಶೀಘ್ರದಲ್ಲಿ ಆರಂಭವಾಗಲಿದ್ದು ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಿರುವ ಎಲ್ಲಾ ಅಭ್ಯರ್ಥಿಗಳು ನೇಮಕಾತಿಗಾಗಿ ಬೇಕಾಗಿರುವ ಸಂಪೂರ್ಣ ಸಿದ್ಧತೆಯನ್ನು ಈಗಿನಿಂದಲೇ ತಯಾರಿ ಆರಂಭಿಸಿ...

Most Popular

Related Posts