ಹೊಸ ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ಆಹ್ವಾನ New Ration Card Application for E shram Registered Workers

GOVT SCHEME
09 November 2024

ಹೊಸ ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ಆಹ್ವಾನ New Ration Card Application for E shram Registered Workers
WhatsApp Group Join Now
Telegram Group Join Now

ರಾಜ್ಯಾದ್ಯಂತ ಅನರ್ಹ ಬಿಪಿಎಲ್ ರೇಷನ್ ಕಾರ್ಡ್ ರದ್ದತಿ ಅಭಿಯಾನದ (BPL Ration Card Cancellation) ನಡುವೆಯೇ ರಾಜ್ಯ ಸರಕಾರ ಹೊಸ ರೇಷನ್ ಕಾರ್ಡ್ ಅರ್ಜಿ (New Ration Card Application) ಹಾಕಲು ಅವಕಾಶ ಕಲ್ಪಿಸಿದೆ. ಅನೇಕ ವರ್ಷಗಳಿಂದ ತಡೆ ಹಿಡಿಯಲಾಗಿದ್ದ ಹೊಸ ಅರ್ಜಿ ಪ್ರಕ್ರಿಯೆಗೆ ಚಾಲನೆ ನೀಡಿದ್ದು; ಸದ್ಯಕ್ಕೆ ಇ-ಶ್ರಮ್ (E-shram) ನೋಂದಾಯಿತ ಕಾರ್ಮಿಕರಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.


ಯಾರೆಲ್ಲ ಅರ್ಜಿ ಸಲ್ಲಿಸಬಹುದು?


ಹಾಗೇ ನೋಡಿದರೆ ಈಗಾಗಲೇ ಅರ್ಜಿ ಸಲ್ಲಿಸಿರುವ ಲಕ್ಷಾಂತರ ಜನಕ್ಕೆ ಇನ್ನೂ ರೇಷನ್ ಕಾರ್ಡ್ ಸಿಕ್ಕಿಲ್ಲ. ರಾಜ್ಯಾದ್ಯಂತ ಲಕ್ಷಾಂತರ ಜನ ಬಿಪಿಎಲ್ (BPL Ration CardÀ) ಪಡಿತರ ಚೀಟಿಗಾಗಿ ಹೊಸ ಅರ್ಜಿ ಹಾಕಲು ಕಾದು ಕೂತಿದ್ದಾರೆ. ಆದರೆ ಆಹಾರ ಇಲಾಖೆ (Karnataka Food Department) ಎಲ್ಲರಿಗೂ ಅರ್ಜಿ ಸಲ್ಲಿಸಲು ಅವಕಾಶ ನೀಡಿಲ್ಲ.


ಬಡತನ ರೇಖೆಗಿಂತ ಕೆಳಗಿರುವ ಎಲ್ಲರಿಗೂ ಬಿಪಿಎಲ್ ಕಾರ್ಡ್ ಅಥವಾ ಆದ್ಯತಾ ಪಡಿತರ ಚೀಟಿ (Priority Ration Card) ಪಡೆಯಲು ಅವಕಾಶವಿದ್ದು; ಸದ್ಯಕ್ಕೆ ಕೇವಲ ಇ-ಶ್ರಮ್ ನೋಂದಾಯಿತ ಅರ್ಹ ಕಾರ್ಮಿಕರಿಗೆ ಮಾತ್ರ ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಬಿಪಿಎಲ್ ಕಾರ್ಡ್ ನೀಡುವ ಕಾರ್ಯ ಪ್ರಾರಂಭವಾಗಿದೆ.


ಅರ್ಜಿ ಹೇಗೆ ಸಲ್ಲಿಸುವುದು?


ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಬಿಪಿಎಲ್ ರೇಷನ್ ಕಾರ್ಡ್ ಹೊಂದಿಲ್ಲದ ಇ-ಶ್ರಮ್ ನೋಂದಾಯಿತ ಎಲ್ಲಾ ಅರ್ಹ ಕಾರ್ಮಿಕರು ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್ ಹಾಗೂ ಬೆಂಗಳೂರು ಒನ್ ಕೇಂದ್ರಗಳಿಗೆ ಸೂಕ್ತ ದಾಖಲೆಯಳೊಂದಿಗೆ ತೆರಳಿ ಅರ್ಜಿ ಸಲ್ಲಿಸಬಹುದಾಗಿದೆ.


ಅರ್ಜಿಯೊಂದಿಗೆ ಆಧಾರ್ ಕಾರ್ಡ್, ಆದಾಯ ಪ್ರಮಾಣ ಪತ್ರ (Income Certificate) ಹಾಗೂ ಇ-ಶ್ರಮ್ ಕಾರ್ಡ್ ಅನ್ನು ಸಲ್ಲಿಸಬೇಕು. ಇವುಗಳ ಪರಿಶೀಲನೆ ನಡೆಸಿ ಒಂದೇ ದಿನದಲ್ಲಿ ಪಡಿತರ ಚೀಟಿಯನ್ನು ಹಂಚಿಕೆ ಮಾಡಲು ಕ್ರಮ ವಹಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಹೆಚ್ಚಿನ ಮಾಹಿತಿಗಾಗಿ ಉಚಿತ ದೂರವಾಣಿ 1800-425-9339 ಅಥವಾ ಸಹಾಯವಾಣಿ 1967ಕ್ಕೆ ಬೆಳಗ್ಗೆ ಕಚೇರಿ ಸಮಯದಲ್ಲಿ (10ರಿಂದ ಸಂಜೆ 5.30) ಸಂಪರ್ಕಿಸುವ೦ತೆ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Most Popular

Related Posts