17,727 ಕೇಂದ್ರ ಸರ್ಕಾರಿ ಹುದ್ದೆಗಳ ಬೃಹತ್ ನೇಮಕಾತಿಗೆ ಅರ್ಜಿ ಆಹ್ವಾನ | ಪದವೀಧರರಿಗೆ ಭರ್ಜರಿ ಅವಕಾಶ SSC CGL Recruitment 2024

JOBS
27 June 2024

17,727 ಕೇಂದ್ರ ಸರ್ಕಾರಿ ಹುದ್ದೆಗಳ ಬೃಹತ್ ನೇಮಕಾತಿಗೆ ಅರ್ಜಿ ಆಹ್ವಾನ | ಪದವೀಧರರಿಗೆ ಭರ್ಜರಿ ಅವಕಾಶ SSC CGL Recruitment 2024
WhatsApp Group Join Now
Telegram Group Join Now

SSC CGL Recruitment 2024 : ಕೇಂದ್ರ ಸರ್ಕಾರದ ಅದೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಲವು ಇಲಾಖೆಗಳಲ್ಲಿ ಖಾಲಿ ಇರುವಂತ 17,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಕೇಂದ್ರ ಸಿಬ್ಬಂದಿ ಆಯ್ಕೆ ಆಯೋಗವು ಅಧಿಕೃತ ಅಧಿಸೂಚನೆ ಹೊರಡಿಸಿದ್ದು; ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ...


ಕೇಂದ್ರ ಸಿಬ್ಬಂದಿ ನೇಮಕಾತಿ ಆಯ್ಕೆ ಆಯೋಗವು (Staff Selection Commission-SSC) ಪ್ರತಿ ವರ್ಷವೂ ನಿರುದ್ಯೋಗಿಗಳಿಗೆ ಉದ್ಯೋಗ ಅವಕಾಶಗಳನ್ನು ಕಲ್ಪಿಸುತ್ತಿದ್ದು ಇದೀಗ ಪದವಿ ಮುಗಿಸಿದ ಉದ್ಯೋಗ ಆಕಾಂಕ್ಷಿಗಳಿಗೆ ಉತ್ತಮ ಅವಕಾಶವನ್ನು ನೀಡಿದೆ. ಈ ಹೊಸ ನೇಮಕಾತಿಗೆ ಜೂನ್ 24ರಂದು ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಕೂಡ ಈಗಾಗಲೇ ಆರಂಭವಾಗಿದೆ. 


ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಇರಬೇಕಾದ ಅರ್ಹತೆಗಳು, ವಯೋಮಿತಿ ಅರ್ಹತೆಗಳು, ಆಯ್ಕೆಯಾದವರಿಗೆ ಸಿಗುವ ಮಾಸಿಕ ಸಂಬಳ, ಆಯೋಗವು ಹೊರಡಿಸುವ ಅಧಿಕೃತ ಅಧಿಸೂಚನೆ, ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಗಳ ವಿವರ ಸೇರಿದಂತೆ ನೇಮಕಾತಿಯ ಸಂಪೂರ್ಣ ವಿವರವು ಈ ಲೇಖನದಲ್ಲಿದೆ.


SSC CGL Recruitment 2024 :  ಸಂಕ್ಷಿಪ್ತ ವಿವರ 


* ನೇಮಕಾತಿ ಇಲಾಖೆ : ಕೇಂದ್ರ ಸಿಬ್ಬಂದಿ ಆಯ್ಕೆ ಆಯೋಗ 

* ಹುದ್ದೆಗಳ ಸಂಖ್ಯೆ : 17,727

* ಹುದ್ದೆಗಳ ಹೆಸರು : ವಿವಿಧ ಗ್ರೂಪ್ ಬಿ, ಗ್ರೂಪ್ ಸಿ ಹುದ್ದೆಗಳು

* ಅರ್ಜಿ ಸಲ್ಲಿಕೆ : ಆನ್‌ಲೈನ್ ಮೂಲಕ 

* ಉದ್ಯೋಗ ಸ್ಥಳ : ಭಾರತದಾದ್ಯಂತ


ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಶೈಕ್ಷಣಿಕ ಅರ್ಹತೆಗಳು

ಕೇಂದ್ರ ಸಿಬ್ಬಂದಿ ಆಯ್ಕೆ ಆಯೋಗವು ನೇಮಕಾತಿ ಮಾಡಿಕೊಳ್ಳುತ್ತಿರುವ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳ ಗ್ರೂಪ್ ಬಿ ಹಾಗೂ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕಕ್ಕೆ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯದಿಂದ ಪದವಿ ಶಿಕ್ಷಣ ಹೊಂದಿರಬೇಕು.


ವಯೋಮಿತಿ ಅರ್ಹತೆ

ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ನಿಗದಿಪಡಿಸಿದ ದಿನಾಂಕಕ್ಕೆ ಕನಿಷ್ಠ 18 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ 30 ವರ್ಷದ ಒಳಗೆ ಇರಬೇಕು. ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ವಿವಿಧ ವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ ಈ ಕೆಳಗಿನಂತೆ ಸಡಿಲಿಕೆ ನೀಡಲಾಗುವುದು.

* ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ : 03 ವರ್ಷ 

* ಪ. ಜಾತಿ, ಪ. ಪಂಗಡ ವರ್ಗದ ಅಭ್ಯರ್ಥಿಗಳಿಗೆ : 05 ವರ್ಷ 

* ಅಂಗವಿಕಲ ಅಭ್ಯರ್ಥಿಗಳಿಗೆ : 10 ರಿಂದ 15 ವರ್ಷ 


ಆಯ್ಕೆಯಾದ ಅಭ್ಯರ್ಥಿಗಳಿಗೆ ಸಿಗುವ ಮಾಸಿಕ ಸಂಬಳವೆಷ್ಟು?

ಕೇಂದ್ರ ಸಿಬ್ಬಂದಿ ಆಯ್ಕೆ ಆಯೋಗದ ಈ ನೇಮಕಾತಿಯಲ್ಲಿ ಅಂತಿಮವಾಗಿ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ಸಂಬಳ ವಿವಿಧ ಇಲಾಖೆಯ ಹುದ್ದೆಗಳಿಗೆ ಅನುಗುಣವಾಗಿ 25,500 ರೂಪಾಯಿ - 1,42,400 ರೂಪಾಯಿ ವರೆಗೆ ವೇತನ ಇರಲಿದೆ.


ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಿಕೊಳ್ಳಲಾಗುವುದು?

ಈ ನೇಮಕಾತಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲಿಗೆ ಎರಡು ಹಂತದ Tier 1 & Tier 2 ಆನ್‌ಲೈನ್ ಮೂಲಕ ಪರೀಕ್ಷೆ (CBT Test) ನಡೆಸಿ ಅಭ್ಯರ್ಥಿಗಳು ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. 


ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕವೆಷ್ಟು?

ಎಸ್‌ಸಿ, ಎಸ್‌ಟಿ ಹಾಗೂ ಎಲ್ಲಾ ವರ್ಗದ ಮಹಿಳಾ ಅಭ್ಯರ್ಥಿಗಳ ಹಾಗೂ ಅಂಗವಿಕಲ ವರ್ಗದ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕವಿಲ್ಲ. ಉಳಿದ ವರ್ಗದ ಅಡಿಯಲ್ಲಿ ಬರುವ ಅಭ್ಯರ್ಥಿಗಳಿಗೆ 100 ರೂಪಾಯಿ ಅರ್ಜಿ ಶುಲ್ಕವನ್ನು ನಿಗದಿಪಡಿಸಿದ್ದು, ನಿಗದಿಪಡಿಸಿದ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕವೇ ಪಾವತಿಸಬೇಕು.


ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಕೆ ಆರಂಭವಾದ ದಿನಾಂಕ : 24-06-2024

ಅರ್ಜಿ ಸಲ್ಲಿಕೆ ಮುಕ್ತಾಯ ದಿನಾಂಕ : 24-07-2024


ಅಧಿಸೂಚನೆ (Download)

ಅರ್ಜಿ ಸಲ್ಲಿಕೆ ಲಿಂಕ್ (Click)

Most Popular

Related Posts